Loading...

ಸೋಮವಾರ ಸಚಿವರ ಪ್ರಮಾಣ ವಚನ: 15 ಮಂದಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಅಂತಿಮ ಪಟ್ಟಿಯಲ್ಲಿ ಯಾರಿದ್ದಾರೆ?

Suddi Mitra Editor

July 31, 2026 • 06:15 PM


ಬೆಂಗಳೂರು, ಜು.31: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಸೋಮವಾರ ನಡೆಯಲಿರುವ ಸಚಿವರ ಪ್ರಮಾಣ ವಚನ ಸಮಾರಂಭದ ಸಿದ್ಧತೆಗಳು ಅಂತಿಮ ಹಂತ ತಲುಪಿವೆ. ಹೈಕಮಾಂಡ್ ಒಪ್ಪಿಗೆ ನೀಡಿರುವ ಸಂಭವನೀಯ ಸಚಿವರ ಪಟ್ಟಿಯೂ ಬಹುತೇಕ ಅಂತಿಮಗೊಂಡಿದೆ ಎನ್ನುವ ಮಾಹಿತಿ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಲಕ್ಷ್ಮಣ ಸವದಿ, ಯಶವಂತರಾಯಗೌಡ ಪಾಟೀಲ್, ಎನ್.ಎಸ್. ಬೋಸರಾಜು, ಬಿ. ನಾಗೇಂದ್ರ, ಎಸ್.ಎಸ್. ಮಲ್ಲಿಕಾರ್ಜುನ, ಅಜಯ್ ಸಿಂಗ್, ಲಕ್ಷ್ಮಿ ಹೆಬ್ಬಾಳಕರ, ಟಿ. ರಘುಮೂರ್ತಿ, ಸಲೀಂ ಅಹಮದ್, ಬಿ. ಶಿವಣ್ಣ, ಎ.ಎಸ್. ಪೊನ್ನಣ್ಣ, ಶಿವರಾಜ್ ತಂಗಡಗಿ ಹಾಗೂ ಬಸವರಾಜ್ ಶಿವಣ್ಣವರ ಅವರು ಸೋಮವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ ಎಂದು ತಿಳಿದುಬಂದಿದೆ. ಇನ್ನೂ ಒಂದು ಸ್ಥಾನಕ್ಕೆ ಸಂತೋಷ್ ಲಾಡ್ ಮತ್ತು ಶ್ರೀನಿವಾಸ್ ಮಾನೆ ಅವರ ನಡುವೆ ಪೈಪೋಟಿ ಮುಂದುವರಿದಿದ್ದು, ಇವರಿಬ್ಬರಲ್ಲಿ ಒಬ್ಬರಿಗೆ ಅವಕಾಶ ದೊರೆಯುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗುತ್ತಿದೆ. ಮತ್ತೊಂದೆಡೆ, ಜಮೀರ್ ಅಹ್ಮದ್ ಖಾನ್ ಹಾಗೂ ರಿಜ್ವಾನ್ ಅರ್ಷದ್ ಅವರ ನಡುವೆ ಸಚಿವ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆಯುತ್ತಿದೆ ಎನ್ನಲಾಗಿದ್ದು, ಅಂತಿಮ ಕ್ಷಣದವರೆಗೂ ಈ ವಿಚಾರ ಕುತೂಹಲ ಮೂಡಿಸಿದೆ. 

- Advertisement -