Loading...

2ನೇ ಅಲ್ಯುಮ್ನಿ ಮೀಟ್ ಸಂಭ್ರಮ; ವಿವಿ ವಿದ್ಯಾರ್ಥಿಗಳ ಬೆಳವಣಿಗೆಗೆ ಹಳೆ ವಿದ್ಯಾರ್ಥಿಗಳ ಸಂಘ ಸೇತುವೆಯಾಗಿ ಕಾರ್ಯನಿರ್ವಹಿಸಬೇಕು -ಡಿವೈಎಸ್ಪಿ ಎಸ್.ರೋಷನ್ ಜಮೀರ್

Suddi Mitra Editor

June 25, 2026 • 02:33 PM

2ನೇ ಅಲ್ಯುಮ್ನಿ ಮೀಟ್ ಸಂಭ್ರಮ; ವಿವಿ ವಿದ್ಯಾರ್ಥಿಗಳ  ಬೆಳವಣಿಗೆಗೆ ಹಳೆ ವಿದ್ಯಾರ್ಥಿಗಳ ಸಂಘ ಸೇತುವೆಯಾಗಿ ಕಾರ್ಯನಿರ್ವಹಿಸಬೇಕು -ಡಿವೈಎಸ್ಪಿ ಎಸ್.ರೋಷನ್ ಜಮೀರ್

ಗುಲ್ಬರ್ಗಾ : ಸೂಕ್ಷ್ಮಜೀವಿ ಶಾಸ್ತ್ರ ವಿಭಾಗವು ಕಳೆದ ಐದು ದಶಕಗಳಿಂದ ಸಾವಿರಾರು ವಿದ್ಯಾರ್ಥಿಗಳನ್ನು ರೂಪಿಸಿದ್ದು, ದೇಶ-ವಿದೇಶಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಳೆ ವಿದ್ಯಾರ್ಥಿಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿರುವುದು ವಿಶೇಷವಾಗಿದೆ ಎಂದು ವಿಶ್ವವಿದ್ಯಾಲಯದ ಹಳೆ ವಿದ್ಯಾರ್ಥಿ ಜಮಖಂಡಿ ಉಪ ವಿಭಾಗದ ಡಿವೈಎಸ್ಪಿ ಎಸ್. ರೋಷನ್ ಜಮೀರ್ ಹೇಳಿದರು.

 ಗುಲ್ಬರ್ಗಾ ವಿಶ್ವವಿದ್ಯಾಲಯದ ಮೈಕ್ರೋಬಯಾಲಜಿ ವಿಭಾಗದ ಸುವರ್ಣ ಮಹೋತ್ಸವ ವರ್ಷದ ಅಂಗವಾಗಿ ಆಯೋಜಿಸಿದ್ದ "2ನೇ ಅಲ್ಯುಮ್ನಿ ಮೀಟ್–2026" ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು 

ಕೊರೊನಾ ಮಹಾಮಾರಿಯ ಸಂದರ್ಭದಲ್ಲಿ ಸೂಕ್ಷ್ಮಜೀವಿ ವಿಜ್ಞಾನಿಗಳ ಸಂಶೋಧನೆ ಮತ್ತು ಪ್ರಯೋಗಾಲಯಗಳ ಕಾರ್ಯದಿಂದಲೇ ವೈರಸ್‌ನ್ನು ಶೀಘ್ರವಾಗಿ ಪತ್ತೆಹಚ್ಚಲು ಸಾಧ್ಯವಾಯಿತು. ಆ ಮೂಲಕ ರೋಗ ನಿಯಂತ್ರಣ ಮತ್ತು ಸಾರ್ವಜನಿಕ ಆರೋಗ್ಯ ರಕ್ಷಣೆಯಲ್ಲಿ ಮೈಕ್ರೋಬಯಾಲಜಿ ಕ್ಷೇತ್ರದ ಮಹತ್ವ ಜಗತ್ತಿಗೆ ತಿಳಿಯಿತು ಎಂದು ತಿಳಿಸಿದರು.

 ತಮ್ಮ ವಿದ್ಯಾರ್ಥಿ ಜೀವನದ ನೆನಪುಗಳನ್ನು ಹಂಚಿಕೊಳ್ಳುತ್ತಾ ವಿಶ್ವವಿದ್ಯಾಲಯ ಮತ್ತು ವಿದ್ಯಾರ್ಥಿಗಳ ನಡುವೆ ಸೇತುವೆಯಾಗಿ ಹಳೆ ವಿದ್ಯಾರ್ಥಿಗಳ ಕಾರ್ಯನಿರ್ವಹಿಸುವ ಮೂಲಕ ವಿದ್ಯಾರ್ಥಿ ಜೀವನದಲ್ಲಿ ಗಳಿಸುವ ಜ್ಞಾನ, ಶಿಸ್ತು ಹಾಗೂ ಮೌಲ್ಯಗಳು ವ್ಯಕ್ತಿಯ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿ ವೃತ್ತಿ ಅವಕಾಶಗಳನ್ನು ಒದಗಿಸುವಲ್ಲಿ ನಮ್ಮ ಸಂಘ ವೇದಿಕೆಯಾಗಬೇಕು ಎಂದರು.

ಇದೇ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಹಳೆ ವಿದ್ಯಾರ್ಥಿ 

 ಆಂದ್ರಪ್ರದೇಶದ ಶಾಸಕ ಗಡ್ಡೆ ರಾಮಮೋಹನ್‌ ದಂಪತಿಗಳಿಗೆ ಸನ್ಮಾನಿಸಲಾಯಿತು. 

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಸೋಸಿಯೇಷನ್ ಅಧ್ಯಕ್ಷ ಡಾ. ಕೆ. ಲಿಂಗಪ್ಪ ವಹಿಸಿದ್ದರು.ಇದೇ ಸಂದರ್ಭದಲ್ಲಿ ವೇದಿಕೆಯ ಮೇಲೆ ಭಾರತ್ ಬಯೋಟೆಕ್ ಸಂಸ್ಥೆಯ ಮಾಜಿ ಉಪಾಧ್ಯಕ್ಷ ಡಾ. ಎಸ್.ವಿ. ಕೋಟಬಾಗಿ, ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲರು ಹಾಗೂ ಮೈಕ್ರೋಬಯಾಲಜಿ ವಿಭಾಗದ ಮುಖ್ಯಸ್ಥರಾಗಿದ್ದ ಡಾ. ಸಿ.ಸಿ ಪಾಟೀಲ್, ಡಾ.ಎಸ್‌ಬಿಎಂಪಿ ಹಾಲಕಟ್ಟಿ, ಗುಲ್ಬರ್ಗಾ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ. ಸಿ.ಟಿ. ಶಿವಣ್ಣನವರ್, ವಿಶ್ರಾಂತ ಕುಲಪತಿ ದಯಾನಂದ, ಸಂಯೋಜಕಿ ಡಾ. ಎಂ.ಬಿ. ಸುಲೋಚನಾ ಹಾಗೂ ಅಸೋಸಿಯೇಷನ್ ಕಾರ್ಯದರ್ಶಿ ಡಾ. ಚಂದ್ರಕಾಂತ ಕೇಳಮನಿ, ಸೇರಿದಂತೆ ಹಳೆ ವಿದ್ಯಾರ್ಥಿಗಳು ಪ್ರಾಧ್ಯಾಪಕರು ಉಪಸ್ಥಿತರಿದ್ದರು.

- Advertisement -