ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಜಟಾಪಟಿ! ಕಗ್ಗಂಟದ ನಡುವೆ ಖಾತೆ ಹಂಚಿಕೆ! ರಾಜೀನಾಮೆ ನೀಡಲು ಸಿದ್ಧರಾಗಿದ್ದ ಹಿರಿಯ ಸಚಿವರು
ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಜಿ.ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಹಾಗೂ ಹಿರಿಯ ಸಚಿವರಗಳ ಹಗ್ಗ ಜಗ್ಗಾಟದ ನಡುವೆ ಖಾತೆ ಹಂಚಿಕೆ ಆಗಿವೆ.ಖಾತೆ ಹಂಚಿಕೆಯು ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದೆ ಯಾರಿಗೆ ಯಾವ ಖಾತೆ ನೀಡಬೇಕೆಂಬುದು ಅವರ ವಿವೇಚನೆಗೆ ಒಳಪಟ್ಟಿದು.
ಆದರೆ ಹಿರಿಯ ಸಚಿವ ರಾಮಲಿಂಗ ರೆಡ್ಡಿ ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ನೀಡಬೇಕೆಂದು ಪಟ್ಟು ಹಿಡಿದು ರಾಜಿನಾಮೆ ನೀಡಲು ಸಿದ್ದರಾಗಿದ್ದರೆಂದು ತಿಳಿದು ಬಂದಿದೆ. ಕೊನೆಗೆ ಅವರ ಬಯಸಿದ್ದರ ಖಾತೆ ಬದಲು ರಾಮಲಿಂಗಾ ರೆಡ್ಡಿ ಅವರಿಗೆ ಜಲಸಂಪನ್ಮೂಲ ಖಾತೆಯ ಜವಾಬ್ದಾರಿ ನೀಡಿ
ಕೃಷ್ಣ ಭೈರೇಗೌಡ ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ವಹಿಸಲಾಗಿದೆ. ಖಾತೆ ವಿಚಾರವಾಗಿ ರಾಮಲಿಂಗಾ ರೆಡ್ಡಿ ಬಂಡಾಯ ಪರಿಗಣನೆಗೆ ತೆಗೆದುಕೊಂಡಿಲ್ಲ ಎಂಬುದು ವಿಶೇಷ.
ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಕಂದಾಯ ಮತ್ತು ಯುವ ಸಬಲೀಕರಣ ಇಲಾಖೆಯ ಜವಾಬ್ದಾರಿ ನೀಡಲಾಗಿದೆ. ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಲೋಕೋಪಯೋಗಿ ಇಲಾಖೆಯ ಜವಾಬ್ದಾರಿಯನ್ನು ನೀಡಲಾಗಿದೆ.
ಪ್ರಮುಖವಾಗಿ ಗೃಹ ಸಚಿವರಾಗಿ ಪ್ರಿಯಾಂಕ್ ಖರ್ಗೆ ನೀಡಿ ಐಟಿಬಿಟಿ ಖಾತೆಯನ್ನು ಹೆಚ್ಚುವರಿಯಾಗಿ ಜವಾಬ್ದಾರಿ ವಹಿಸಲಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಭೈರತಿ ಸುರೇಶ್ ಅವರಿಗೆ ಸಾರಿಗೆ ಇಲಾಖೆ ನೀಡಲಾಗಿದೆ.
ಡಿಕೆ ಶಿವಕುಮಾರ್ ಸಂಪುಟದ ಮತ್ತೋರ್ವ ಪ್ರಮುಖ ಸಚಿವ ಕೆಜೆ ಜಾರ್ಜ್ ಅವರಿಗೆ ಇಂಧನ ಮತ್ತು ಪ್ರವಾಸೋದ್ಯಮ ಖಾತೆ ನೀಡಲಾಗಿದೆ.
ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರಿಗೆ ನಗರಾಭಿವೃದ್ಧಿ ಖಾತೆಯನ್ನು ನೀಡಲಾಗಿದೆ.
ಯುಟಿ ಖಾದರ್ ಅವರಿಗೆ ಆರೋಗ್ಯ ಇಲಾಖೆಯ ಜವಾಬ್ದಾರಿ ನೀಡಿದ್ದರೆ, ಶರಣ್ ಪ್ರಕಾಶ್ ಪಾಟೀಲ್ ಅವರಿಗೆ ವೈಧ್ಯಕೀಯ ಶಿಕ್ಷಣ ಖಾತೆಯನ್ನು ನೀಡಲಾಗಿದೆ.
ಕೆಎಚ್ ಮುನಿಯಪ್ಪ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಅದೇ ರೀತಿ ಎಂಬಿ ಪಾಟೀಲ್ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆಯನ್ನು ನೀಡಲಾಗಿದೆ. ಇವರು ಸಿದ್ದರಾಮಯ್ಯ ಸರ್ಕಾರದಲ್ಲೂ ಇದೇ ಖಾತೆಯ ಜವಾನಬ್ದಾರಿಯನ್ನು ಹೊತ್ತಿದ್ದರು. ಹಾಗೆಯೇ ಮತ್ತೋರ್ವ ಹಿರಿಯ ಸಚಿವ ಈಶ್ವರ್ ಖಂಡ್ರೆ ಗ್ರಾಮೀಣಾಭಿವೃದ್ಧಿ ನೀಡಿದ್ದಾರೆ.ಇನ್ನು ಎರಡನೇ ಹಂತದ ಸಚಿವ ಸಂಪುಟದ ವಿಸ್ತರಣೆಯಲ್ಲಿ ಮತ್ತೆ ಯಾರಿಗೆ ಯಾವ ಖಾತೆ ನೀಡಲಾಗುತ್ತದೆ ಎಂಬುದನ್ನು ಕಾದುನೋಡಬೇಕಿದೆ.