Loading...

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ರೈತರಿಗೆ ಸಧ್ಯದಲ್ಲಿ ಸಿಹಿ ಸುದ್ದಿ ! ಬೆಂಗಳೂರು ರಸ್ತೆಗಳಿಗೆ 2ಸಾವಿರ ಕೋಟಿ ! ಬಿ ಖಾತಾಯಿಂದ ಎ ಖಾತೆ ಯೋಜನೆ ರಾಜ್ಯಕ್ಕೆ ವಿಸ್ತರಣೆ

Suddi Mitra Editor

June 03, 2026 • 05:26 PM

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್  ರೈತರಿಗೆ ಸಧ್ಯದಲ್ಲಿ ಸಿಹಿ ಸುದ್ದಿ !  ಬೆಂಗಳೂರು ರಸ್ತೆಗಳಿಗೆ 2ಸಾವಿರ ಕೋಟಿ !  ಬಿ ಖಾತಾಯಿಂದ ಎ ಖಾತೆ ಯೋಜನೆ ರಾಜ್ಯಕ್ಕೆ ವಿಸ್ತರಣೆ

ಬೆಂಗಳೂರು: ಡಿಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ರೈತರಿಗೆ ಕೂಲಿ ಕಾರ್ಮಿಕರಿಗೆ ಅನುಕೂಲ ಕಲ್ಪಿಸುವ ಯೋಜನೆಯನ್ನು ಜಾರಿಗೆ ತರಲು ತಿರ್ಮಾನಿಸಲಾಗಿದೆ ರೈತರಿಗೆ ಕೊಡುಗೆ ನೀಡಲು ಸಧ್ಯದಲ್ಲಿ ರೈತ ಮುಖಂಡರು ಅಧಿಕಾರಿಗಳು ತಜ್ಞರು ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಇಂದು ಸಂಜೆ ವಿಧಾನಸೌಧದಲ್ಲಿ ನಡೆದ ತಮ್ಮ ನೇತೃತ್ವದ ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ರಾಜ್ಯದಲ್ಲಿ ಹೊಸ ಯುಗ ಆರಂಭಿಸಲು, ನಾವು ಮೊದಲ ಸಚಿವ ಸಂಪುಟ ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ ಎಂದರು.

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದು, ರಾಜ್ಯದಲ್ಲಿ ಇನ್ಮುಂದೆ ವಿದ್ಯಾರ್ಥಿನಿಯರಂತೆ ಎಲ್ಲಾ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೂ ಕೂಡ ಉಚಿತ ಬಸ್ ಪಾಸ್ ನೀಡಲಾಗುವುದು. ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶೀಘ್ರದಲ್ಲೇ ಉಚಿತ ಬಸ್ ಪಾಸ್ ವಿತರಿಸಲು ಅರ್ಜಿ ಕರೆಯಲಾಗುವುದು ಎಂದರು.

ಬಿ ಖಾತಾಯಿಂದ ಎ ಖಾತೆ ಯೋಜನೆ ರಾಜ್ಯಕ್ಕೆ ವಿಸ್ತರಣೆ

ಬೆಂಗಳೂರಿಗಷ್ಟೇ ಸೀಮಿತವಾಗಿದ್ದ ಬಿ ಖಾತಾಯಿಂದ ಎ ಖಾತೆ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು. ಅನಧಿಕೃತ ಕಟ್ಟಡಗಳಿಗೆ ಎ-ಖಾತಾ ದಾಖಲೆ ನೀಡುವ ಅಭಿಯಾನವನ್ನು ಇಡೀ ರಾಜ್ಯಕ್ಕೆ ವಿಸ್ತರಿಸುತ್ತೇವೆ ಎಂದರು.

ಮೊದಲ ಸಚಿವ ಸಂಪುಟದ ಘೋಷಣೆಗಳು

ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

ಬೆಂಗಳೂರು ನಗರ ರಸ್ತೆಗಳ ನಿರ್ಮಾಣಕ್ಕೆ ಹೊಸದಾಗಿ 2000 ಕೋಟಿ ರೂ. ಘೋಷಣೆ.

2,500 ಚದರ ಅಡಿವರೆಗೂ ಒಸಿ ವಿನಾಯಿತಿ. ಇದರೊಂದಿಗೆ 2,500 ಚ.ಅಡಿ ವಿಸ್ತೀರ್ಣ ಕಟ್ಟಡಕ್ಕೆ ಅರ್ಜಿ ಹಾಕಿದವರಿಗೆ ರಿಲೀಫ್.

ಪ್ರತಿ‌ ಪಂಚಾಯತ್ ಗೂ ಭಾರತ್ ಜೋಡೋ ಯುವಕ ಸಂಘ ಸ್ಥಾಪನೆಗೆ 10 ಸಾವಿರ ರೂಪಾಯಿ ಘೋಷಣೆ.

ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಹುಡುಕುತ್ತಿದ್ದವರಿಗೆ private employment exchange centre ಸ್ಥಾಪಿಸಿ ವಿದ್ಯೆಗೆ ತಕ್ಕಂತೆ ತರಬೇತಿ ನೀಡಿ ಉದ್ಯೋಗ ಕಲ್ಪಿಸುವ ಕಾರ್ಯ ಮಾಡಲಾಗುತ್ತದೆ.

- Advertisement -