Loading...

ಧೈರ್ಯವಿದ್ದರೆ ನನ್ನನ್ನೇ ಎದುರಿಸಿ! ಪೊಲೀಸರ ಕ್ರಮಕ್ಕೆ ಕುಮಾರಸ್ವಾಮಿ ಸವಾಲು

Suddi Mitra Editor

October 14, 2026 • 03:05 PM

ಧೈರ್ಯವಿದ್ದರೆ ನನ್ನನ್ನೇ ಎದುರಿಸಿ! ಪೊಲೀಸರ ಕ್ರಮಕ್ಕೆ ಕುಮಾರಸ್ವಾಮಿ ಸವಾಲು

ಜೆಡಿಎಸ್ ಸೋಶಿಯಲ್ ಮೀಡಿಯಾ ತಂಡದ ಸದಸ್ಯ ಪೊಲೀಸ್ ವಶಕ್ಕೆ

ಪ್ರಶ್ನಿಸಿದ್ದು ನಾನು : ನಮ್ಮ ತಂಡದ ಸದಸ್ಯರ ಮೇಲೆಕೆ ದಬ್ಬಾಳಿಕೆ ಎಂದ ಎಚ್.ಡಿ.ಕೆ

ಸಾಕು ನಿಲ್ಲಿಸಿ ನಿಮ್ಮ ಕಪಟ ನಾಟಕ ಎಂದು ಎಚ್.ಡಿ.ಕೆ. ಗರಂ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಿದ ನೈಜ ಅಪರಾಧಿಯನ್ನು ಬಿಟ್ಟು ಜೆಡಿಎಸ್ ಸಾಮಾಜಿಕ ಜಾಲತಾಣ ತಂಡದ ಯುವಕನನ್ನು ವಶಕ್ಕೆ ಪಡೆದಿರುವ ಪೊಲೀಸರ ಕ್ರಮಕ್ಕೆ ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದಾರೆ

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು, ನಮ್ಮವರಿಗೆ ಹೀಗೆ ಸುಖಾಸುಮ್ಮನೆ ಕಿರುಕುಳ ಕೊಟ್ಟರೆ ಕೈಕಟ್ಟಿ ಕೂರುವುದಿಲ್ಲ. ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಎದುರಿಸಲು ಸಿದ್ಧರಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಎಂಟು ವರ್ಷಗಳಿಗೂ ಹೆಚ್ಚುಕಾಲ ರಾಜ್ಯವನ್ನು ಆಳಿದ ಮಾಜಿ ಮುಖ್ಯಮಂತ್ರಿ ವರ್ಚಸ್ಸಿಗೆ ಹನಿಟ್ರ್ಯಾಪ್ ಹೆಸರಿನಲ್ಲಿ ಮಸಿ ಬಳಿಯಲು ರೂಪಿಸಿದ ವ್ಯವಸ್ಥಿತ, ಸಂಘಟಿತ ಷಡ್ಯಂತ್ರವನ್ನು ಪ್ರಶ್ನಿಸಿದ್ದಕ್ಕೆ ನನ್ನನ್ನು ಹಾಗೂ ನನ್ನ ಜೊತೆಗಿರುವ ಹುಡುಗರನ್ನು ಟಾರ್ಗೆಟ್ ಮಾಡುತ್ತಿರುವುದು ಲಜ್ಜೆಗೆಡಿತನ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಯಾವುದೇ ಪ್ರಕರಣ ದಾಖಲಿಸದೇ ಇಂದು ಬೆಳಗ್ಗೆ ಜೆಡಿಎಸ್ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಶಂಕರ್ ಎಂಬ ಯುವಕನನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ ಎಂದರು.

ಸಾಕು ನಿಲ್ಲಿಸಿ ನಿಮ್ಮ ಕಪಟ ನಾಟಕ

ನಂತರ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪಕ್ಷದ ಕಾನೂನು ವಿಭಾಗ ದೂರು ದಾಖಲಿಸಿದ ಮೇಲೆ ಆ ಯುವಕನಿಂದ ಆತನ ಪತ್ನಿಗೆ ಕರೆ ಮಾಡಿಸಿ, ಸಿಸಿಬಿ ಪೊಲೀಸರು ನನ್ನನ್ನು ಕರೆದುಕೊಂಡು ಹೋಗಿದ್ದಾರೆ" ಎಂದಷ್ಟೇ ಹೇಳಿಸಿ ಕರೆ ಕಟ್ ಮಾಡಿದ್ದೀರಿ 

ಸಾಕು ಮಾಡಿ ನಿಮ್ಮ ಕಪಟ ನಾಟಕ.

ಯಾವ ಆಧಾರದ ಮೇಲೆ ಆತನನ್ನು ಕರೆದುಕೊಂಡು ಹೋಗಿದ್ದೀರಿ? ಎಂದು ಕೇಂದ್ರ ಸಚಿವರು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಅವರ ವಿರುದ್ಧ ಸ್ಟಿಂಗ್ ಮಾಡಿ, ದೃಶ್ಯಗಳನ್ನು ಚಿತ್ರೀಕರಿಸಿ ಅವರ ಚಾರಿತ್ರ್ಯಹರಣಕ್ಕೆ ಕಾರಣನಾದ ನೀಚನನ್ನು ಬಿಟ್ಟು, ಆ ನೀಚತನವನ್ನು ಪ್ರಶ್ನಿಸಿದ ನನ್ನನ್ನು ನೇರವಾಗಿ ಎದುರಿಸಲಾಗದೆ ನನ್ನ ಹುಡುಗರ ಬೆನ್ಹತ್ತಿದ್ದೀರಾ? ಎಲ್ಲವನ್ನೂ ರೆಕಾರ್ಡ್ ಮಾಡಿದ 'ಮಾಧ್ಯಮದ ಮುಸುಕು' ಹಾಕಿಕೊಂಡಿರುವ ಆ 'ಸಂಚುಕೋರ' ರಾಜಾರೋಷವಾಗಿ ತಿರುಗಾಡುತ್ತಿದ್ದರೆ, ಆ ನೈಜ ಅಪರಾಧಿಯನ್ನು ಬಿಟ್ಟು ನಮ್ಮ ಸೋಶಿಯಲ್ ಮೀಡಿಯಾ ಹುಡುಗರ ಮೇಲೆ ಬಿದ್ದಿದ್ದೀರಿ ಎಂದು ಸಚಿವ ಕುಮಾರಸ್ವಾಮಿ ಅವರು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಶ್ನೆ ಮಾಡಿದ್ದು ನಾನು. ಸಿಬಿಐ ತನಿಖೆಗೆ ಒತ್ತಾಯಿಸಿದ್ದು ನಾನು. ಧೈರ್ಯವಿದ್ದರೆ ನನ್ನ ಬಳಿಗೇ ನಿಮ್ಮ ಪೊಲೀಸರನ್ನು ಕಳಿಸಬೇಕಿತ್ತು, ಅಮಾಯಕರ ಮೇಲೇನು ನಿಮ್ಮ ಪ್ರತಾಪ ಎಂದು ಪ್ರಶ್ನಿಸಿರುವ ಸಚಿವರು; ಅಷ್ಟೇ ಅಲ್ಲ, ಈಗ ನಮ್ಮ ಸೋಶಿಯಲ್ ಮೀಡಿಯಾ ತಂಡದ ಮೋಹನ್ ಎಂಬ ಇನ್ನೊಬ್ಬ ಹುಡುಗನ ಮನೆ ಮುಂದೆ ಹೋಗಿ ಪೊಲೀಸರು ಗಲಾಟೆ ಮಾಡುತ್ತಿದ್ದಾರೆ, ಅವರ ಕುಟುಂಬದವರಿಗೆ ಕಿರುಕುಳ ಕೊಡುತ್ತಿದ್ದಾರೆ ಎಂಬ ಮಾಹಿತಿ ನನಗೆ ಬಂದಿದೆ. ಇದೆಲ್ಲವನ್ನೂ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

- Advertisement -