Loading...

ಗವಿಸಿದ್ದೇಶ್ವರ ಶ್ರೀಗಳಿಂದ ಈ ಬಾರಿಯ ಮೈಸೂರು ದಸರಾ ಉದ್ಘಾಟನೆ: ಸಿಎಂ ಡಿ ಕೆ ಶಿವಕುಮಾರ್ ಘೋಷಣೆ

Suddi Mitra Editor

September 24, 2026 • 03:46 PM

ಗವಿಸಿದ್ದೇಶ್ವರ ಶ್ರೀಗಳಿಂದ ಈ ಬಾರಿಯ ಮೈಸೂರು ದಸರಾ ಉದ್ಘಾಟನೆ: ಸಿಎಂ ಡಿ ಕೆ ಶಿವಕುಮಾರ್ ಘೋಷಣೆ

ಬೆಂಗಳೂರು, ಸೆ.24 :

"ಈ ಬಾರಿಯ ನಾಡ ಹಬ್ಬ ಮೈಸೂರು ದಸರಾವನ್ನು ಕೊಪ್ಪಳದ ಗವಿಮಠದ ಪರಮಪೂಜ್ಯ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳು ಉದ್ಘಾಟಿಸಲಿದ್ದಾರೆ" ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಘೋಷಿಸಿದರು.

ವಿಧಾನಸಭೆಯಲ್ಲಿ ಗುರುವಾರ ನಡೆದ ಬರಗಾಲದ ಚರ್ಚೆಗೆ ಉತ್ತರಿಸಿದ ಸಂದರ್ಭದಲ್ಲಿ ಶಿವಕುಮಾರ್ ಅವರು ಈ ವಿಚಾರ ತಿಳಿಸಿದರು. ಸದನದ ಎಲ್ಲಾ ಸದಸ್ಯರನ್ನು ದಸರಾ ಉತ್ಸವಕ್ಕೆ ಆಹ್ವಾನಿಸಿದರು.

"ಈ ಬಾರಿ ಕೊಪ್ಪಳದ ಪರಮಪೂಜ್ಯ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳಿಗೆ ಉದ್ಘಾಟನೆ ಮಾಡಬೇಕು ಎಂದು ಆಹ್ವಾನ ಪತ್ರ ಕಳುಹಿಸಿದ್ದೇನೆ. ಇಂದು ಬೆಳಗ್ಗೆ ಅವರ ಜತೆ ದೂರವಾಣಿ ಮೂಲಕವೂ ಮಾತನಾಡಿದ್ದೇನೆ. ಅವರು ನಮ್ಮ ಆಹ್ವಾನವನ್ನು ಒಪ್ಪಿಕೊಂಡಿದ್ದಾರೆ" ಎಂದು ತಿಳಿಸಿದರು.

"ಮುಂದಿನ ತಿಂಗಳು ನಾಡಹಬ್ಬ ದಸರಾ ಬರುತ್ತಿದೆ. ಈ ವರ್ಷದ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ತಮ್ಮೆಲ್ಲರಿಗೂ ನಾನು ಆಹ್ವಾನ ನೀಡುತ್ತಿದ್ದೇನೆ. ಎಲ್ಲರೂ ಬರಬೇಕು" ಎಂದರು.

- Advertisement -