2 ಬಾರಿ ಬೆಂಗಳೂರು ಅಭಿವೃದ್ದಿ ಖಾತಗೆ ಭರವಸೆ! ಮಾತು ತಪ್ಪಿದ ಕಾಂಗ್ರೆಸ್ ನಾಯಕರು ! Ramalinga reddy ಸಚಿವ ಸ್ಥಾನಕ್ಕೆ ರಾಜೀನಾಮೆ
ಬೆಂಗಳೂರು:ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡದಿದ್ದಕ್ಕೆ ಬೇಸರಗೊಂಡ ರಾಮಲಿಂಗಾರೆಡ್ಡಿ ಕಚೇರಿಗೆ ಆಗಮಿಸಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ್ದು, ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ಘೋಷಣೆ ಮಾಡಿದ್ದಾರೆ.
ಖಾತೆ ಹಂಚಿಕೆಯಾದ ಬೆನ್ನಲ್ಲೇ ತೀವ್ರ ಅಸಮಾಧಾನ ಸ್ಫೋಟಗೊಂಡಿದ್ದು, ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರು ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದರು.ಇವರ ಬಂಡಾಯ ಹೇಳಿಕೆಯನ್ನು ಸಿಎಂ ಡಿಕೆಸಿ,ಕಾಂಗ್ರೆಸ್ ವರಿಷ್ಠರು ಪರಿಗಣನೆಗೆ ತೆಗೆದುಕೊಂಡಿಲ್ಲದ ಕಾರಣದಿಂದಾಗಿ ಇಂದು ಅಧಿಕೃತವಾಗಿ ರಾಜೀನಾಮೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತಾಡಿದ ರಾಮಲಿಂಗಾರೆಡ್ಡಿ ಅವರು, ನಾನು 1973 ರಲ್ಲಿ ವಿದ್ಯಾರ್ಥಿ ನಾಯಕನಾಗಿ ರಾಜಕೀಯಕ್ಕೆ ಬಂದೆ. ವೀರಪ್ಪ ಮೊಯ್ಲಿ ನನಗೆ ಕರೆದು ಟಿಕೆಟ್ ಕೊಟ್ರು. ಆರು ಬಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. ಯಾರ ಬಳಿಯೂ ಇಂಥಹುದೇ ಖಾತೆ ಕೊಡಿ ಅಂತ ಲಾಬಿ ಮಾಡಿಲ್ಲ.
ಅವರೇ ಎರಡು ಬಾರಿ ಕರೆದಿ ಬೆಂಗಳೂರು ಅಭಿವೃದ್ದಿ ಕೊಡ್ತೀವಿ ಅಂತ ಹೇಳಿ ಈಗ ಕೊಡಲಿಲ್ಲ. ಈ ವಿಚಾರಕ್ಕೆ ಬೇಸರವಾಗಿ ಈ ನಿರ್ಧಾರ ತೆಗೆದುಕೊಂಡಿರೋದಾಗಿ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.