Loading...

Rss ಮುಖ್ಯಸ್ಥ ಮೋಹನ ಭಗವತ್- ಪ್ರಿಯಾಂಕಾ ಖರ್ಗೆ ಜಟಾಪಟಿ: ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ

Suddi Mitra Editor

June 15, 2026 • 11:52 AM

Rss ಮುಖ್ಯಸ್ಥ ಮೋಹನ  ಭಗವತ್- ಪ್ರಿಯಾಂಕಾ ಖರ್ಗೆ ಜಟಾಪಟಿ: ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ

ಬೆಂಗಳೂರು: RSS ಸಂಘಟನೆಯು ಕಾನೂನಿನ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಈ ಹಿಂದೆ ಸಿದ್ದರಾಮಯ್ಯ ಸಂಪುಟದಲ್ಲಿದ್ದಾಗ ಆರ್‌ಎಸ್‌ಎಸ್‌ ವಿರುದ್ಧ ಸಮರ ಸಾರಿದ್ದ ಪ್ರಿಯಾಂಕ್ ಖರ್ಗೆ , ಇದೀಗ ಸಮರ ಮುಂದುವರೆಸಿದ್ದಾರೆ. ಡಿಕೆ ಶಿವಕುಮಾರ್ ಸಂಪುಟದಲ್ಲಿ ಗೃಹಸಚಿವರಾದ ಮರು ಕ್ಷಣವೇ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಪ್ರಿಯಾಂಕ್ ಖರ್ಗೆ ಸುದೀರ್ಘ ಪತ್ರ ಬರೆದು 8 ಪ್ರಶ್ನೆಗಳಿಗೆ ಉತ್ತರಿಸುವಂತೆ ಸಂದೇಶ ಕಳುಹಿಸಿದು ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಚಲನ ಮೂಡಿಸಿದೆ.

ನೂರು ವರ್ಷ ಪೂರೈಸಿದ್ದಕ್ಕೆ ಅಭಿನಂದನೆ: 

100 ವರ್ಷಗಳನ್ನು ಪೂರೈಸಿದ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಭಾರತ ಸೇರಿದಂತೆ ವಿದೇಶಗಳಲ್ಲಿ 60,000ಕ್ಕೂ ಹೆಚ್ಚು ಶಾಖೆಗಳು ಮತ್ತು ಕೋಟ್ಯಾಂತರ ಸ್ವಯಂಸೇವಕರನ್ನು ಹೊಂದಿರುವ ಈ ಸಂಸ್ಥೆಯು ನಿಸ್ಸಂದೇಹವಾಗಿ ಸಾರ್ವಜನಿಕ ಜೀವನ ಮತ್ತು ಸಮಾಜದಲ್ಲಿ ಗಮನಾರ್ಹ ಉಪಸ್ಥಿತಿಯನ್ನು ಹೊಂದಿರುವ

ಕಾರಣದಿಂದಾಗಿ ಆರ್‌ಎಸ್‌ಎಸ್‌ ದೇಶದ ಕಾನೂನಿಗೆ ಬದ್ಧವಾಗಿರಬೇಕು ರಾಷ್ಟ್ರೀಯತೆ, ಶಿಸ್ತು, ಕರ್ತವ್ಯದ ಕುರಿತು ನಿರಂತರವಾಗಿ ಮಾತನಾಡುವ ಆರ್‌ಎಸ್‌ಎಸ್‌, ಪಾರದರ್ಶಕತೆ, ಕಾನೂನು ಪಾಲನೆ, ಸಂವಿಧಾನದ ಬಗೆಗಿನ ಗೌರವವನ್ನೂ ಅಷ್ಟೇ ದೃಢವಾಗಿ ಪ್ರದರ್ಶಿಸಬೇಕು.

ನಿಯಮಗಳನ್ನ ಪಾಲಿಸಬೇಕೆನ್ನುವ ಆರ್‌ಎಸ್‌ಎಸ್‌ ಮಾತ್ರ ಅದೇ ನಿಯಮಗಳಿಂದ ವಿನಾಯಿತಿ ಪಡೆದುಕೊಳ್ಳುವ ನೈತಿಕ ಹಕ್ಕು ಇಲ್ಲ ಅಂತ ಪ್ರಿಯಾಂಕ್ ಹೇಳಿದ್ದಾರೆ. ಕಾರ್ಮಿಕರು, ಸಣ್ಣ ಸಂಘ-ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು, ಎನ್‌ಜಿಒಗಳು, ಟ್ರಸ್ಟ್‌ಗಳು, ಕಂಪನಿಗಳು ಮತ್ತು ನಾಗರಿಕರು ನೋಂದಣಿ, ಬಹಿರಂಗಪಡಿಸುವಿಕೆ, ಲೆಕ್ಕಪರಿಶೋಧನೆ ಮತ್ತು ತೆರಿಗೆ ಪಾವತಿಗೆ ಬದ್ಧರಾಗಿದ್ದಾರೆ. ಆದ್ದರಿಂದ ಆರ್‌ಎಸ್‌ಎಸ್ ಕೂಡ ದೇಶದ ಕಾನೂನಿಗೆ ಮಾದರಿಯಾಗಿ ಬದ್ಧವಾಗಿರಬೇಕು ಅಂತ ಒತ್ತಾಯಿಸಿದ್ದಾರೆ.

ದೇಶಕ್ಕೆ Rss ನೀಡಬಹುದಾದ ಅತ್ಯುತ್ತಮ ಗೌರವವೆಂದರೆ, ತನ್ನನ್ನು ತಾನು ನೋಂದಾಯಿಸಿಕೊಳ್ಳುವುದು, ತನ್ನ ಚಟುವಟಿಕೆಗಳು, ಆರ್ಥಿಕ ವ್ಯವಹಾರಗಳನ್ನು ಬಹಿರಂಗಪಡಿಸುವುದು. ಜೊತೆಗೆ ಅನ್ವಯವಾಗುವ ಎಲ್ಲ ತೆರಿಗೆಗಳನ್ನು ಪಾವತಿಸುವುದು ಅಂತ ಪ್ರಿಯಾಂಕ್ ಹೇಳಿದ್ದಾರೆ.

8 ಅಂಶಗಳ ಬಗ್ಗೆ ಮಾಹಿತಿ ಕೇಳಿದ ಪ್ರಿಯಾಂಕ್

1.ಆರ್‌ಎಸ್‌ಎಸ್‌ನ ಕಾನೂನಾತ್ಮಕ ಸ್ಥಾನಮಾನ ಮತ್ತು ಸಂಘಟಿತ ರಚನೆ ವಿವರ,

2.ಪದಾಧಿಕಾರಿಗಳು ಮತ್ತು ಅಧಿಕೃತ ಪ್ರತಿನಿಧಿಗಳ ವಿವರಗಳು 

3.ದೇಣಿಗೆ, ಕೊಡುಗೆ ಮತ್ತು ಆದಾಯದ ಮೂಲಗಳು

4.ವೆಚ್ಚ ಮತ್ತು ಆಸ್ತಿಪಾಸ್ತಿಗಳ ವಿವರಗಳು.

5 ಕಾನೂನಿನ ಪ್ರಕಾರ ಅನ್ವಯವಾಗುವ ತೆರಿಗೆಗಳನ್ನು ಸಕ್ರಮವಾಗಿ ಪಾವತಿಸಲಾಗುತ್ತಿದೆಯೇ ಎಂಬ ವಿಷಯ.

6 ಔಪಚಾರಿಕ ನೋಂದಣಿಯಿಲ್ಲದೆ ತನ್ನ ಚಟುವಟಿಕೆಗಳನ್ನು ನಡೆಸಲು ಯಾವ ಕಾನೂನಾತ್ಮಕ ಆಧಾರವನ್ನು ಅವಲಂಬಿಸಲಾಗಿದೆ ಎಂಬ ವಿಷಯ.

7 ಯಾವುದೇ ಸಾರ್ವಜನಿಕ ಜವಾಬ್ದಾರಿಯಿಲ್ಲದೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಕಾರ್ಯನಿರ್ವಹಿಸುವ ಹಕ್ಕನ್ನು ಯಾವ ಸಾಂವಿಧಾನಿಕ ಮತ್ತು ಶಾಸನಾತ್ಮಕ ಚೌಕಟ್ಟಿನ ಅಡಿಯಲ್ಲಿ ಪಡೆದುಕೊಳ್ಳಲಾಗಿದೆ? 

8 ಸಾರ್ವಜನಿಕ ಕಾರ್ಯಕ್ರಮಗಳು, ಮಾರ್ಗ ಮೆರವಣಿಗೆಗಳು, ಸಾಮೂಹಿಕ ಸಭೆಗಳು ಮತ್ತು ಇತರ ಸಂಘಟಿತ ಚಟುವಟಿಕೆಗಳಿಗೆ ಅನುಮತಿಗಳು, ಅಧಿಕಾರಗಳು ಮತ್ತು ಅನುಸರಣಾ ಕಾರ್ಯವಿಧಾನಗಳ ವಿವರ ಹೀಗೆ ಪತ್ರ ಬರೆದು ಅಧಿಕೃತ ಚರ್ಚೆಗೆ ಸಿದ್ಧ ಎಂದ ಸಚಿವ ಪ್ರಿಯಾಂಕ ಖರ್ಗೆ ಭಾರತೀಯ ಕಾನೂನಿನ ಚೌಕಟ್ಟಿನೊಳಗೆ ಪಾರದರ್ಶಕ, ಜವಾಬ್ದಾರಿಯುತ ಸಂಘಟನೆಯಾಗಿ ಕಾರ್ಯನಿರ್ವಹಿಸಬೇಕು. ಈ ಸಂಬಂಧ ನಾವು ನಿಮ್ಮ ಅಧಿಕೃತ ಚರ್ಚೆಗೆ ಸಿದ್ದರಿದ್ದೇವೆ.ಅಂತ ಪ್ರಿಯಾಂಕ್ ಖರ್ಗೆ ಪತ್ರದಲ್ಲಿ ಬರೆದಿದ್ದಾರೆ.

- Advertisement -